alex Certify ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ

ಹರ್ಯಾಣದಲ್ಲಿ ಸಂಬಂಧಕ್ಕೆ ಕಳಂಕ ತರುವ ಘಟನೆ ನಡೆದಿದೆ. ಪತಿ ವಿರುದ್ಧ ದೂರು ನೀಡಿದ ಪತ್ನಿ ಆತನನ್ನು ಜೈಲಿಗೆ ಕಳುಹಿಸಿದ್ದಾಳೆ. ಆರೋಪಿ ಪತಿ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪಾಪಿ ತಂದೆ ಕ್ರೌರ್ಯಕ್ಕೆ ಪೀಡಿತೆ 9 ತಿಂಗಳ ಗರ್ಭಿಣಿಯಾಗಿದ್ದಳು. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಪೀಡಿತೆಯನ್ನು ರಕ್ಷಿಸಿದ್ದಾರೆ. ಮಗು ಹೊಟ್ಟೆಯಲ್ಲಿಯೇ ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ. ಮಗಳು ಗರ್ಭಿಣಿಯಾದ ವಿಷ್ಯ ತಾಯಿಗೆ ಗೊತ್ತಿರಲಿಲ್ಲವಂತೆ. ಹೊಟ್ಟೆ ನೋವಿನ ಕಾರಣ ಆಸ್ಪತ್ರೆಗೆ ಕರೆತಂದಿದ್ದಳಂತೆ.

ಮಗಳ ಅತ್ಯಾಚಾರಕ್ಕೆ ತಂದೆ ಕಾರಣವೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಹೇಳಿಕೆ ಆಧಾರದ ಮೇಲೆ ಆರೋಪಿ ತಂದೆಯನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...