alex Certify ಇಬ್ಬರು ಹೆಣ್ಣು ಮಕ್ಕಳಿಗೆ ರಕ್ಕಸನಾದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಹೆಣ್ಣು ಮಕ್ಕಳಿಗೆ ರಕ್ಕಸನಾದ ತಂದೆ

ತಂದೆ-ಮಕ್ಕಳ ಸಂಬಂಧ ಪವಿತ್ರವಾದದ್ದು. ಆದ್ರೆ ಈ ಪವಿತ್ರ ಸಂಬಂಧಕ್ಕೆ ಕಳಂಕ ತರುವ ಘಟನೆ ನಡೆದಿದೆ. ಪುಣೆಯಲ್ಲಿ ಪಾಪಿ ತಂದೆ ತನ್ನಿಬ್ಬರು ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಪತ್ನಿಯೇ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ತನ್ನಿಬ್ಬರು ಅಪ್ರಾಪ್ತ ಮಕ್ಕಳ ಮೇಲೆ ತಂದೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಸತತ ನಾಲ್ಕು ವರ್ಷಗಳಿಂದ ತಂದೆ ಕಾಮತೃಷೆ ತೀರಿಸಿಕೊಂಡಿದ್ದಾನೆ. 2016ರಲ್ಲಿ ಮಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತಂತೆ. ವೈದ್ಯರು ಸೋನೋಗ್ರಫಿಗೆ ಸಲಹೆ ನೀಡಿದ್ದರಂತೆ. ಆದ್ರೆ ತಂದೆ ಅದಕ್ಕೆ ಅವಕಾಶ ನೀಡಿರಲಿಲ್ಲವಂತೆ.

ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವುದು ತಾಯಿಗೆ ಗೊತ್ತಿರಲಿಲ್ಲವಂತೆ. ಮಧ್ಯರಾತ್ರಿ ಮಗಳು ಅಳ್ತಿರುವುದನ್ನು ನೋಡಿ ವಿಚಾರಿಸಿದಾಗ ಮಗಳು ಈ ವಿಷ್ಯ ಬಾಯ್ಬಿಟ್ಟಿದ್ದಾಳೆ. ಈ ಬಗ್ಗೆ ಪ್ರಶ್ನೆ ಮಾಡಿದ್ರೆ ಹತ್ಯೆ ಮಾಡುವುದಾಗಿ ಪತಿ ಬೆದರಿಸಿದ್ದ ಎನ್ನಲಾಗಿದೆ. ಎರಡು ಹೆಣ್ಣು ಹಾಗೂ ಎರಡು ಗಂಡು ಮಕ್ಕಳ ತಾಯಿ 2020ರ ಜೂನ್ ತಿಂಗಳಿನಿಂದಲೇ ಪತಿ ಬಿಟ್ಟು ಪ್ರತ್ಯೇಕವಾಗಿ ವಾಸ ಶುರು ಮಾಡಿದ್ದಾಳೆಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...