alex Certify ಜಮ್ಮು ಏರ್​ಪೋರ್ಟ್​ನಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮ್ಮು ಏರ್​ಪೋರ್ಟ್​ನಲ್ಲಿ ಅಗ್ನಿ ಅವಘಡ

Fire at Jammu airport damages ticket counters - india news - Hindustan Times

ಜಮ್ಮು ಏರ್​ ಪೋರ್ಟ್​ನ ಟಿಕೆಟಿಂಗ್​ ಕೌಂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ . ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗುರುವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಟಿಕೆಟಿಂಗ್​ ಕೌಂಟರ್​ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಕೂಡಲೇ ಐಎಎಫ್​ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಅಂತಾ ಸತ್ವಾರಿ ಠಾಣೆಯ ಸ್ಟೇಷನ್​ ಹೌಸ್ ಅಧಿಕಾರಿ ನಿಶಾಂತ್​ ಗುಪ್ತಾ ಮಾಹಿತಿ ನೀಡಿದ್ದಾರೆ .

ಟಿಕೆಟ್​ ಕೌಂಟರ್​ನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ 45 ನಿಮಿಷಗಳಲ್ಲಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ವಿಮಾನಯಾನದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ. ನಿಗದಿತ ವೇಳಾಪಟ್ಟಿಯಂತೆ ವಿಮಾನಗಳು ಸಂಚರಿಸುತ್ತಿವೆ ಅಂತಾ ಜಮ್ಮು ಏರ್​ಪೋರ್ಟ್ ನಿರ್ದೇಶಕ ಪ್ರವತ್​ ರಂಜನ್​ ಬ್ಯೂರಿಯಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...