alex Certify BIG BREAKING: ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ‌ ಇನ್ಸ್ಟಿಟ್ಯೂಟ್‌ ನಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ‌ ಇನ್ಸ್ಟಿಟ್ಯೂಟ್‌ ನಲ್ಲಿ ಅಗ್ನಿ ಅವಘಡ

ಮಹಾರಾಷ್ಟ್ರದ ಪುಣೆಯಲ್ಲಿರುವ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್‌ ನ ಟರ್ಮಿನಲ್‌ 1 ರಲ್ಲಿ ಭಾರಿ ಆಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ ಐ ವರದಿ ಮಾಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸೈರಸ್‌ ಪೂನಾವಾಲಾ ಹಾಗೂ ಆದಾರ್‌ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್‌ ಲಸಿಕೆಯನ್ನು ತಯಾರಿಸುತ್ತಿದ್ದು, ಈಗಾಗಲೇ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ.

ಅಗ್ನಿ ಅವಘಡ ಸಂಭವಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ 10 ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...