ನವದೆಹಲಿ: ಪ್ರವಾಹ ಪೀಡಿತ ಜನರ ಮನೆಬಾಗಿಲಿಗೆ ಪಡಿತರ ತಲುಪಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೂಚನೆ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಮನೆಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಕೈಗೊಳ್ಳಬೇಕು. ಪ್ರವಾಹದ ಸಂಕಷ್ಟದಿಂದ ಜನ ಸುರಕ್ಷಿತ ಪ್ರದೇಶಗಳಿಗೆ ತೆರವುಗೊಂಡಿದ್ದಾರೆ. ಅವರು ಇರುವ ಸ್ಥಳಕ್ಕೆ ಪಡಿತರ ತಲುಪಿಸಬೇಕೆಂದು ಸಚಿವರು ಹೇಳಿದ್ದಾರೆ.
ದೇಶದ 81 ಕೋಟಿ ಜನರಿಗೆ ಒಂದು ರೂಪಾಯಿಂದ ಮೂರು ರೂಪಾಯಿ ದರದಲ್ಲಿ ವಿವಿಧ ಧಾನ್ಯಗಳನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪೂರೈಕೆ ಮಾಡುತ್ತಿದೆ ಎಂದು ಹೇಳಲಾಗಿದೆ.