ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ಶಂಕರ್ ಸಿಂಗ್ ವಘೇಲಾ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.