ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾಣ್ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೃತಕ ಉಸಿರಾಟದ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು.
ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ 73 ವರ್ಷದ ಚೇತನ್ ಚವಾಣ್ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರೆಂದು ಹೇಳಲಾಗಿದೆ.
ಉತ್ತರಪ್ರದೇಶ ಸರ್ಕಾರದ ಸಚಿವರಾಗಿದ್ದ ಚೇತನ್ ಚೌಹಾಣ್ ಅವರಿಗೆ ಜುಲೈ 12 ರಂದು ಕೊರೊನಾ ಸೋಂಕು ತಗಲಿದ್ದು ಲಖ್ನೋದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಿನಿಂದಲೂ ಅವರು ಚೇತರಿಸಿಕೊಂಡಿರಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಮೇದಾಂತ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.