alex Certify BIG BREAKING: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇನ್ನಿಲ್ಲ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾಣ್ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೃತಕ ಉಸಿರಾಟದ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು.

ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ 73 ವರ್ಷದ ಚೇತನ್ ಚವಾಣ್ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರೆಂದು ಹೇಳಲಾಗಿದೆ.

ಉತ್ತರಪ್ರದೇಶ ಸರ್ಕಾರದ ಸಚಿವರಾಗಿದ್ದ ಚೇತನ್ ಚೌಹಾಣ್ ಅವರಿಗೆ ಜುಲೈ 12 ರಂದು ಕೊರೊನಾ ಸೋಂಕು ತಗಲಿದ್ದು ಲಖ್ನೋದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಿನಿಂದಲೂ ಅವರು ಚೇತರಿಸಿಕೊಂಡಿರಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಮೇದಾಂತ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...