alex Certify BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ದೀರ್ಘಕಾಲ ಕೋಮಾದಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 1935 ಡಿಸೆಂಬರ್ 11 ರಂದು ಜನಿಸಿದ್ದ ಪ್ರಣಬ್ ಮುಖರ್ಜಿ ಭಾರತೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು.

ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕಿಂಕರ ಮುಖರ್ಜಿ ರಾಜಲಕ್ಷ್ಮಿ ದಂಪತಿಯ ಜನಿಸಿದ ಅವರು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಬಿ, ಎಂಎ ಎಲ್.ಎಲ್.ಬಿ.  ಪದವಿ ಪಡೆದಿದ್ದರು.

1957 ರ ಜುಲೈ 3 ರಂದು ಸುವ್ರಾ ಅವರನ್ನು ಮದುವೆಯಾಗಿದ್ದ ಅವರಿಗೆ ಇಬ್ಬರು ಪುತ್ರರು ಓರ್ವ ಪುತ್ರಿ ಇದ್ದಾರೆ. 2018 ಆಗಸ್ಟ್ 18ರಂದು ಅವರ ಪತ್ನಿ ನಿಧನರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...