ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆಸಿರುವ ಘಟನೆ ನಡೆದಿದೆ.
ಆಲಿಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಲ್ವಾರ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದವರನ್ನು ವಶಕ್ಕೆ ಪಡೆಯಲಾಗಿದೆ.
ರೈತ ಕಾಯ್ದೆ ತಿದ್ದುಪಡಿಯ ಸಂಪೂರ್ಣ ಮಾಹಿತಿ ಎಲ್ಲ ರೈತರಿಗೆ ಅರ್ಥವಾದರೆ ಇಡೀ ದೇಶದಲ್ಲಿ ಬೆಂಕಿ: ರಾಹುಲ್ ಹೇಳಿಕೆ
ಇದೇ ವೇಳೆ ಸಿಂಘು ಗಡಿಯಲ್ಲಿ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ರೈತರು ಹಾಗೂ ಪ್ರತಿಭಟನಾಕಾರರ ನಡುವೆ ಮಾರಾಮಾರಿ ನಡೆದಿದೆ.
ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಅಶ್ರುವಾಯುಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿದ್ದಾರೆ. ಆದರೂ ಬಗ್ಗದ ಪ್ರತಿಭಟನಾನಿರತ ರೈತರು ಜಾಗಬಿಟ್ಟು ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಾರೆ ಸಿಂಘು ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.