ಕೊರೊನಾ ಲಸಿಕೆ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಜಾವಡೇಕರ್ ಹೇಳಿದ್ದಾರೆ.
ಈವರೆಗೆ ಕಾಯಿಲೆಯಿಂದ ಬಳಲುತ್ತಿದ್ದ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಆದ್ರೆ ಏಪ್ರಿಲ್ 1ರ ನಂತ್ರ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದು. ಇದಕ್ಕೆ ಯಾವುದೇ ಪ್ರಮಾಣಪತ್ರ ತೋರಿಸುವ ಅಗತ್ಯವಿಲ್ಲ.
ದೇಶದಲ್ಲಿ ಲಸಿಕೆ ಪ್ರಮಾಣ ಸಾಕಷ್ಟಿದೆ. ಅರ್ಹರು ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಾವಡೇಕರ್ ಹೇಳಿದ್ದಾರೆ. 45 ವರ್ಷ ಮೇಲ್ಪಟ್ಟ ಎಲ್ಲ ವ್ಯಕ್ತಿಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕೊರೊನಾದ ಎರಡು ಡೋಸ್ ನಡುವಿನ ಅಂತರ ಎಷ್ಟು ಎಂದು ವೈದ್ಯರು ನಿರ್ಧರಿಸುತ್ತಾರೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ವಿಜ್ಞಾನಿಗಳು ಮತ್ತು ವಿಶ್ವ ವೈಜ್ಞಾನಿಕ ಸಂಸ್ಥೆಗಳ ಸಲಹೆಯ ಪ್ರಕಾರ, ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರವನ್ನು 6–8 ವಾರಗಳವರೆಗೆ ಹೆಚ್ಚಿಸಲಾಗಿದೆ. ಆದ್ರೆ ಇದು ಕೋವ್ಯಾಕ್ಸಿನ್ ಲಸಿಕೆಗಳಿಗೆ ಅನ್ವಯಿಸುವುದಿಲ್ಲ.