ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮನೆಗೆ ನುಗ್ಗಿದ ದುಷ್ಕರ್ಮಿ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ ಅಮಾನವೀಯ ಘಟನೆ ವರದಿಯಾಗಿದೆ. ತಡರಾತ್ರಿ ಈ ಘಟನೆ ವರದಿಯಾಗಿದೆ.
ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಮೀರತ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂತ್ರಸ್ತೆಗೆ ತೀವ್ರವಾದ ಗಾಯಗಳಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನ ಕೇವಲ ಆರು ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರನ್ನ ಆಧರಿಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಈ ಘಟನೆ ಸಂಜೆ 7.30ರ ಸುಮಾರಿಗೆ ನಡೆದಿದೆ. ಆಸಿಡ್ ಅಂಶವನ್ನೊಳಗೊಂಡ ರಾಸಾಯನಿಕವನ್ನ ಬಾಲಕಿಯ ಮೈಮೇಲೆ ಎರಚಲಾಗಿದೆ. ಆಕೆಯನ್ನ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಳಿಕ ಆಕೆಯನ್ನ ಹೆಚ್ಚಿನ ಚಿಕಿತ್ಸೆಗೆ ಮೀರತ್ಗೆ ರವಾನಿಸಲಾಗಿದೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನೀರಜ್ ಜದೌನ್ ಮಾಹಿತಿ ನೀಡಿದ್ದಾರೆ.