alex Certify ಆಸಿಡ್​ ದಾಳಿ ನಡೆದ ಕೇವಲ 6 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸಿಡ್​ ದಾಳಿ ನಡೆದ ಕೇವಲ 6 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು….!

ಉತ್ತರ ಪ್ರದೇಶದ ಹಾಪುರ್​ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮನೆಗೆ ನುಗ್ಗಿದ ದುಷ್ಕರ್ಮಿ ಆಕೆಯ ಮೇಲೆ ಆಸಿಡ್​ ದಾಳಿ ನಡೆಸಿದ ಅಮಾನವೀಯ ಘಟನೆ ವರದಿಯಾಗಿದೆ. ತಡರಾತ್ರಿ ಈ ಘಟನೆ ವರದಿಯಾಗಿದೆ.

ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಮೀರತ್​ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂತ್ರಸ್ತೆಗೆ ತೀವ್ರವಾದ ಗಾಯಗಳಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬಾಲಕಿಯ ಮೇಲೆ ಆಸಿಡ್​ ದಾಳಿ ನಡೆಸಿದ ದುಷ್ಕರ್ಮಿಯನ್ನ ಕೇವಲ ಆರು ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರನ್ನ ಆಧರಿಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಈ ಘಟನೆ ಸಂಜೆ 7.30ರ ಸುಮಾರಿಗೆ ನಡೆದಿದೆ. ಆಸಿಡ್ ಅಂಶವನ್ನೊಳಗೊಂಡ ರಾಸಾಯನಿಕವನ್ನ ಬಾಲಕಿಯ ಮೈಮೇಲೆ ಎರಚಲಾಗಿದೆ. ಆಕೆಯನ್ನ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಳಿಕ ಆಕೆಯನ್ನ ಹೆಚ್ಚಿನ ಚಿಕಿತ್ಸೆಗೆ ಮೀರತ್​ಗೆ ರವಾನಿಸಲಾಗಿದೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ನೀರಜ್​ ಜದೌನ್​ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...