ಕೊರೊನಾ ಸಾಂಕ್ರಾಮಿಕದ ನಡುವೆಯೇ ವೃದ್ಧರಿಗೆ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಂತೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಆರ್.ಎಸ್. ರೆಡ್ಡಿ ನೇತೃತ್ವದ ಪೀಠ ಈ ಹಿಂದೆ ಅಂದರೆ ಕಳೆದ ವರ್ಷ ಆಗಸ್ಟ್ 4ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ವೃದ್ಧರ ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದಿದ್ದ ನೀಡಿದ್ದ ನಿರ್ದೇಶನವನ್ನ ಮಾರ್ಪಾಡು ಮಾಡಿ ಈ ಆದೇಶ ಹೊರಡಿಸಿದೆ.
ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಈ ಅರ್ಜಿಯಲ್ಲಿ ಅಶ್ವನಿ ಕುಮಾರ್, ಪಂಜಾಬ್ ಹಾಗೂ ಒಡಿಶಾ ಹೊರತುಪಡಿಸಿ ಇತರೆ ಯಾವುದೇ ರಾಜ್ಯಗಳು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನವನ್ನ ಅನುಸರಿಸಿ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿಲ್ಲ ಎಂದು ಹೇಳಿದ್ದಾರೆ.
ವೃದ್ಧರಿಗೆ ರಿಲೀಫ್ ನೀಡಲು ಅಶ್ವನಿ ಕುಮಾರ್ ನೀಡಿರುವ ಸಲಹೆಗಳಿಗೆ ಸ್ಪಂದಿಸುವಂತೆ ದೇಶದ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿದೆ.