alex Certify ಇಲ್ಲಿದೆ ‘ಮುಂಗಾರು’ ಮುಖ್ಯ ಮಾಹಿತಿ: ಈ ಬಾರಿ ಸರಾಸರಿಗಿಂತಲೂ ಅಧಿಕ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ‘ಮುಂಗಾರು’ ಮುಖ್ಯ ಮಾಹಿತಿ: ಈ ಬಾರಿ ಸರಾಸರಿಗಿಂತಲೂ ಅಧಿಕ ಮಳೆ

ನವದೆಹಲಿ: ದೇಶದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆಯಾಗಲಿದೆ. ಸರಾಸರಿಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಡಾ. ಮಾಧವನ್ ನಾಯರ್ ರಾಜೀವನ್ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ದೇಶದಲ್ಲಿ ಮುಂಗಾರುಮಳೆ ಆಗಮನಕ್ಕೆ ಉತ್ತಮವಾದ ವಾತಾವರಣ ಇದ್ದು, ಮುಂಗಾರಿಗೆ ಮುನ್ನ ಅನುಕೂಲಕರವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.

ಜೂನ್ ನಿಂದ ಸೆಪ್ಟಂಬರ್ ವರೆಗಿನ ಅವಧಿಯಲ್ಲಿ ಸರಾಸರಿಗಿಂತ ಅಧಿಕ ಮಳೆಯಾಗಲಿದೆ. ಸರಾಸರಿ 88 ಸೆ.ಮೀ. ಮಳೆಯಾಗಲಿದೆ. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮಳೆಯಾಗಲಿದೆ. ಉತ್ತಮ ಮುಂಗಾರು ಮಳೆ ಆಗಮನಕ್ಕೆ ಪರಿಸ್ಥಿತಿಗಳು ಹೆಚ್ಚು ಅನುಕೂಲಕರವಾಗಿದೆ ಎಂದು ಹೇಳಿದ್ದಾರೆ.

ಅದೇ ರೀತಿ ಮುಂದಿನ ಎರಡು ದಿನಗಳ ಅವಧಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರಿತ್ಯ ಉಂಟಾಗಲಿದ್ದು ಕೇರಳ, ಲಕ್ಷದ್ವೀಪ, ಕರ್ನಾಟಕ ಮತ್ತು ಗೋವಾ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...