alex Certify GOOD NEWS: ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳೆಷ್ಟು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳೆಷ್ಟು…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 30,548 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,45,127ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 435 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,30,070ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,65,478 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 82,49,579 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 43,851 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...