alex Certify GOOD NEWS: ಕಳೆದ 8 ತಿಂಗಳಲ್ಲಿ ಮೊದಲ ಬಾರಿ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದ ಕೊರೊನಾ – ಸಾವಿನ ಸಂಖ್ಯೆಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕಳೆದ 8 ತಿಂಗಳಲ್ಲಿ ಮೊದಲ ಬಾರಿ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದ ಕೊರೊನಾ – ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,635 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,66,245ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 94 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,486 ಕ್ಕೆ ಏರಿಕೆಯಾಗಿದೆ.

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ

ಇನ್ನು ದೇಶದಲ್ಲಿ 1,63,353 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,48,406 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 13,423 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 6,59,422 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,77,52,057 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...