alex Certify GOOD NEWS: ಗಣನೀಯವಾಗಿ ಇಳಿಕೆ ಕಂಡ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ – 97,61,538ಸೋಂಕಿತರು ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಗಣನೀಯವಾಗಿ ಇಳಿಕೆ ಕಂಡ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ – 97,61,538ಸೋಂಕಿತರು ಗುಣಮುಖ

ನವದೆಹಲಿ: ಹೊಸ ಕೊರೊನಾ ಸೋಂಕಿನ ಆತಂಕದ ನಡುವೆಯೂ ಕಳೆದ 24 ಗಂಟೆಯಲ್ಲಿ 18,732 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,87,850ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 279 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,622 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,78,690 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 97,61,538ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 21,430 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 9,43,368 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 16,81,02,657 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...