alex Certify GOOD NEWS: ದೇಶದಲ್ಲಿ ಇನ್ನಷ್ಟು ಇಳಿಕೆ ಕಂಡ ಕೋವಿಡ್ ಕೇಸ್; 24 ಗಂಟೆಯಲ್ಲಿ 14,808 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದೇಶದಲ್ಲಿ ಇನ್ನಷ್ಟು ಇಳಿಕೆ ಕಂಡ ಕೋವಿಡ್ ಕೇಸ್; 24 ಗಂಟೆಯಲ್ಲಿ 14,808 ಜನರು ಡಿಸ್ಚಾರ್ಜ್

  • Coronavirus in India: How the Covid-19 pandemic affects India

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,083 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,33,131ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 137 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,147ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,69,824 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,09,160 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,808 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,56,329 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,58,37,408 ಜನರಿಗೆ ಕೊರೊನಾ ಮಾದರಿ ಪರೀಕ್ಷೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...