ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಸಹ ಕೊರೊನಾ ಅಬ್ಬರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.
ಹಿರಿಯ ನಾಗರಿಕರಿಗೆ ಮುಖ್ಯ ಮಾಹಿತಿ: ವಿಶೇಷ ಠೇವಣಿ ಯೋಜನೆಗೆ ಇವತ್ತೇ ಕೊನೆ ದಿನ
ದೇಶದಲ್ಲಿ ಕೊರೊನಾ ಲಸಿಕೆ ನೀಡುವ ಅಭಿಯಾನ ನಡೆಯುತ್ತಿದ್ದು, ಮೊದಲ ಹಂತದಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಆದ್ಯತೆ ನೀಡಲಾಗಿತ್ತು. ಎರಡನೇ ಹಂತದಲ್ಲಿ ಇತರೆ ಕೊರೊನಾ ವಾರಿಯರ್ಸ್ ಗಳಿಗೆ ಆದ್ಯತೆ ನೀಡಲಾಗಿದ್ದು, ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗಿತ್ತು.
ಇದೀಗ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್ 1 ರ ನಾಳೆಯಿಂದ ಕೊರೊನಾ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಲಸಿಕೆ ಪಡೆಯುವವರು ಆಧಾರ್ ಕಾರ್ಡ್ ನೊಂದಿಗೆ ಲಸಿಕಾ ಕೇಂದ್ರಕ್ಕೆ ತೆರಳಿ ನೊಂದಾಯಿಸಿಕೊಳ್ಳಬಹುದಾಗಿದೆ.