ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,102 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,06,76,838ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 117 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,53,587 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,77,266 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,03,45,985 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 15,901 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 20,23,809 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.