alex Certify GOOD NEWS: 6 ತಿಂಗಳ ಬಳಿಕ ಗಣನೀಯವಾಗಿ ಇಳಿಕೆಯಾದ ಕೊರೊನಾ ಸೋಂಕು – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತೇ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 6 ತಿಂಗಳ ಬಳಿಕ ಗಣನೀಯವಾಗಿ ಇಳಿಕೆಯಾದ ಕೊರೊನಾ ಸೋಂಕು – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತೇ…?

ಕೊರೊನಾ ಎರಡನೇ ಅಲೆ ಭಯ: ಮುಂಜಾಗ್ರತಾ ಕ್ರಮ, ಎಲ್ಲಾ ಬಂದ್ ಬಂದ್.. ಎಲ್ಲೆಲ್ಲಿ?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,432 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,24,303ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 252 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,48,153ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,68,581ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 98,07,569 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 24,900 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 9,83,695 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 16,98,01,749 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...