ನವದೆಹಲಿ: ಕಾನೂನುಬಾಹಿರ ಚಟುವಟಿಕೆ ನಡೆಸಿದ ಇಬ್ಬರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಆದೇಶಿಸಿದೆ.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ ಗುರು ಪತ್ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ ನ ಹರದೀಪ್ ಸಿಂಗ್ ನಿಜ್ಜಾರ್ ಅವರ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ.
ಕಳೆದ ವರ್ಷ ಕೇಂದ್ರ ಸರ್ಕಾರ ಯುಎಪಿಎ ಕಾಯ್ದೆ ತಿದ್ದುಪಡಿ ಮಾಡಿದ್ದು ಇದರಲ್ಲಿ ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬಹುದಾಗಿದೆ. ಅಂತೆಯೇ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ. ಈ ಕಾಯ್ದೆಯಡಿಯಲ್ಲಿ ಮುಖ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವ ಮೊದಲ ಪ್ರಕರಣ ಇದಾಗಿದೆ.
ಕೇಂದ್ರ ಗೃಹ ಸಚಿವಾಲಯ ಗುರು ಪತ್ವಂತ್ ಸಿಂಗ್ ಸೇರಿ 9 ಜನ ಖಲಿಸ್ತಾನಿ ಉಗ್ರರರನ್ನು ಭಯೋತ್ಪಾದಕರು ಎಂದು ಘೋಷಿಸಿದ್ದು, ಅವರಲ್ಲಿ ಇಬ್ಬರ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ.