ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗಾಗಿ ಕಳೆದ ಮಾರ್ಚ್ ನಲ್ಲಿ ಜಾರಿಗೊಳಿಸಿದ್ದ 50 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಗಿದೆ.
22.12 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್ ವಿಮಾ ಕಂಪನಿ ಮೂಲಕ 50 ಲಕ್ಷ ರೂ. ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು ಜೂನ್ 30 ಕ್ಕೆ ಅಂತ್ಯವಾಗಲಿದೆ. ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವ ಹಿನ್ನಲೆಯಲ್ಲಿ ವೈದ್ಯರು, ನರ್ಡ್ ಗಳು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗಾಗಿ ಯೋಜನೆಯನ್ನು ಮಾರ್ಚ್ 30 ರಿಂದ ಆರಂಭಿಸಿದ್ದು ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.