alex Certify ಗಮನಿಸಿ: ಕೊರೊನಾದಂತೆ ಮಲೇರಿಯಾ, ಡೆಂಗ್ಯೂಗೂ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಕೊರೊನಾದಂತೆ ಮಲೇರಿಯಾ, ಡೆಂಗ್ಯೂಗೂ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ಸದ್ಯ ಕೊರೊನಾ ಮಹಾಮಾರಿ ವಿರುದ್ಧ ಹೋರಾಡುತ್ತಿರೋ ಭಾರತ ಇದೀಗ ಬೇರೆ ಸಾಂಕ್ರಾಮಿಕ ಕಾಯಿಲೆ ಉಲ್ಬಣವಾಗದಂತೆ ತಡೆಯಲು ಹೊಸ ಕ್ರಮ ಕೈಗೊಂಡಿದೆ. ಇದರನ್ವಯ ಕೇಂದ್ರ ಆರೋಗ್ಯ ಸಚಿವಾಲಯ ಡೆಂಗ್ಯೂ, ಮಲೇರಿಯಾ, ಚಿಕೂನ್​ ಗೂನ್ಯಾ ಸೇರಿದಂತೆ ವಿವಿಧ ಹಳೆಯ ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಮಾರ್ಗಸೂಚಿ ಪ್ರಕಟಿಸಿದೆ.

ಈಗಾಗಲೇ ಕೊರೊನಾ ವೈರಸ್​ ನಿಂದ ಜನರು ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಳೆಯ ಯಾವುದೇ ಸಾಂಕ್ರಾಮಿಕ ಕಾಯಿಲೆ ಹೆಚ್ಚಾದರೆ ಕಷ್ಟ ಅಂತಾ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಹೀಗಾಗಿ ಜ್ವರ, ಕೆಮ್ಮು, ಆಯಾಸ, ತಲೆನೋವು, ವಾಂತಿ ಸೇರಿದಂತೆ ಈ ತರಹದ ಯಾವುದೇ ಲಕ್ಷಣಗಳು ಕಂಡುಬಂದರೂ ಸಹ ಕೂಡಲೇ ವೈದ್ಯರನ್ನ ಕಾಣುವಂತೆ ಸೂಚನೆ ನೀಡಿದೆ.

ಪ್ರತಿ ವರ್ಷ ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್​ ಗುನ್ಯಾದಂತ ಕಾಯಿಲೆಗಳು ಜನರನ್ನ ಬಾಧಿಸುತ್ತಿತ್ತು. ಆದರೆ ಈ ಬಾರಿ ಕೊರೊನಾ ಕೂಡ ಈ ಸಾಲಿಗೆ ಸೇರಿಕೊಂಡಿದೆ. ಹೀಗಾಗಿ ಕೊರೊನಾ ಸೋಂಕಿತನಿಗೆ ಇನ್ನೊಂದು ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅದು ಪ್ರಾಣಕ್ಕೆ ಸಂಚಕಾರ ತರಬಲ್ಲದು. ಆದ್ದರಿಂದ ಮಾರ್ಗಸೂಚಿ ಪಾಲನೆ ಮಾಡುವಂತೆ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...