alex Certify ಅಂಗನವಾಡಿ, ಶಾಲಾ ಮಕ್ಕಳಿಗೆ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ, ಶಾಲಾ ಮಕ್ಕಳಿಗೆ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಕೇಂದ್ರ ಜಲ ಶಕ್ತಿ ಸಚಿವಾಲಯದ ವತಿಯಿಂದ ದೇಶಾದ್ಯಂತ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

100 ದಿನಗಳ ಅಭಿಯಾನಕ್ಕೆ ಇವತ್ತು ಚಾಲನೆ ನೀಡಲಾಗಿದ್ದು ಇದನ್ನು ಜನಾಂದೋಲನವನ್ನಾಗಿ ರೂಪಿಸುವಂತೆ ಕೇಂದ್ರದ ಶಕ್ತಿ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

ಎಲ್ಲಾ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕುರಿತಾಗಿ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಜಲ ಜೀವನ ಮಿಷನ್ ಲಾಂಛನ ಬಿಡುಗಡೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಎಲ್ಲಾ ಶಾಲೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕರೆ ನೀಡಿದ್ದಾರೆ. ಅಂತೆಯೇ ಅಭಿಯಾನದ ಮೂಲಕ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ 100 ದಿನಗಳೊಳಗೆ ದೇಶದ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ ಎಂದು ಗಜೆಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...