alex Certify ಲಾಕ್ಡೌನ್ 4 ಮಾರ್ಗಸೂಚಿ ರಿಲೀಸ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ 4 ಮಾರ್ಗಸೂಚಿ ರಿಲೀಸ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನವದೆಹಲಿ: ಕೇಂದ್ರ ಸರ್ಕಾರದಿಂದ ಲಾಕ್ಡೌನ್ 4.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಮೇ 31 ರವರೆಗೂ ಲಾಕ್ ಡೌನ್ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿ ನೀಡಿ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ.

ಶಾಲಾ-ಕಾಲೇಜು, ತರಬೇತಿ ಕೇಂದ್ರ, ಕೋಚಿಂಗ್ ಸೆಂಟರ್, ಮೆಟ್ರೋ ಸಂಚಾರ ಇರುವುದಿಲ್ಲ. ಹೋಟೆಲ್ ಸರ್ವೀಸ್, ರೆಸ್ಟೋರೆಂಟ್, ಚಿತ್ರಮಂದಿರ ಬಂದ್ ಮುಂದುವರೆಯಲಿದೆ. ವಿಮಾನ ಯಾನ ಈ ಹಿಂದಿನಂತೆಯೇ ಬಂದ್ ಆಗಲಿದೆ. ಲಾಡ್ಜ್ ಕೂಡ ಬಂದ್ ಆಗಲಿವೆ. ಕೊರೋನಾ ಕರ್ತವ್ಯಕ್ಕೆ ನಿರತರಾದವರು ಮತ್ತು ಕ್ವಾರಂಟೈನ್ ವ್ಯವಸ್ಥೆ ಹೊರತುಪಡಿಸಿ ಲಾಡ್ಜ್ ಗಳಿಗೆ ಅನುಮತಿ ಇರುವುದಿಲ್ಲ. ಹೋಟೆಲ್ ಗಳಲ್ಲಿ ಪಾರ್ಸೆಲ್ ಮತ್ತು ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಶಾಪಿಂಗ್ ಮಾಲ್,  ಈಜುಕೊಳ, ಬಾರ್, ಸಭೆ ಸಮಾರಂಭಗಳಿಗೆ ನಿರ್ಬಂಧವಿದೆ. ಕ್ರೀಡಾ ಚಟುವಟಿಕೆಗಳಿಗೆ ಷರತ್ತುಗಳೊಂದಿಗೆ ಅವಕಾಶ ನೀಡಿದ್ದರೂ ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ.

ಸಾಂಸ್ಕೃತಿಕ, ಮನರಂಜನೆ, ಧಾರ್ಮಿಕ, ರಾಜಕೀಯ, ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಮುಂದುವರೆದಿದೆ. ಜನ ಸೇರುವುದಕ್ಕೆ ನಿಷೇಧವಿರುತ್ತದೆ. ದೇವಾಲಯ, ಮಂದಿರ, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಮುಂದುವರೆದಿದೆ.

ಅನಾರೋಗ್ಯದಿಂದ ಬಳಲುತ್ತಿರುವವರು, 50 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ಇರುವುದಿಲ್ಲ. ಆಯ್ದ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಗೂಡ್ಸ್, ಕಾರ್ಗೋ ಟ್ರಕ್ ಓಡಾಟಕ್ಕೆ ಅವಕಾಶವಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...