ನವದೆಹಲಿ: ದೇಶಾದ್ಯಂತ ಕೊರೊನಾ ಲಾಕ್ ಡೌನ್ ನಿರ್ಬಂಧ ಸಡಿಲಿಸುವ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಜುಲೈ 1 ರಿಂದ ಅನ್ವಯವಾಗುವಂತೆ 2.0 ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಇನ್ನಷ್ಟು ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಜುಲೈ 31 ರವರೆಗೆ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಸ್ಥಳದ ಆಧಾರದ ಮೇಲೆ 5ಕ್ಕಿಂತ ಹೆಚ್ಚಿನ ಜನರಿಗೆ ಅಂಗಡಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಜುಲೈ 31 ರವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿಯಿರುವುದಿಲ್ಲ. ಮಾಲ್ ತೆರೆಯಲು ನಿರ್ಬಂಧವಿದೆ. ಅದೇ ರೀತಿ ಶಾಲಾ – ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.