ನವದೆಹಲಿ: ಕೊರೋನಾ ತಡೆಗೆ ಜೂನ್ 30 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಿದ್ದರೂ, ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಅನ್ಲಾಕ್ 2.0 ಜಾರಿಗೆ ಸಿದ್ಧತೆ ನಡೆಸಿದೆ.
ಲಾಕ್ಡೌನ್ ಸಡಿಲಿಕೆ ನಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಏರಿಕೆಯಾಗಿದ್ದರೂ, ಪೂರ್ವಯೋಜನೆಯಂತೆ ಲಾಕ್ ಡೌನ್ 2 ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಲಿದೆ ಎಂದು ಹೇಳಲಾಗಿದೆ.
ಮೆಟ್ರೊ ಸೇವೆ ಪುನಾರಂಭ, ಶಿಕ್ಷಣ ಸಂಸ್ಥೆಗಳ ಪುನರಾರಂಭ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ, ವಲಸೆ ಕಾರ್ಮಿಕರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ಹೇಳಲಾಗಿದೆ.
ಜುಲೈ 15 ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಯಾಣಿಕರ ರೈಲು ಸಂಚಾರಕ್ಕೂ ನಿರ್ಬಂಧವಿದೆ. ಮೆಟ್ರೋ ರೈಲು ಸಂಚಾರ ಆರಂಭಕ್ಕೆ ಅನೇಕ ರಾಜ್ಯಗಳು ಅನುಮತಿ ಕೋರಿದ್ದು, ಸರ್ಕಾರ ಈ ಕುರಿತಾಗಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.