ಬರೇಲಿ: ಉತ್ತರಪ್ರದೇಶದಿಂದ ವರದಿಯಾದ ಲೈಂಗಿಕ ದೌರ್ಜನ್ಯದ ಮತ್ತೊಂದು ಘಟನೆಯಲ್ಲಿ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.
ಗೆಳೆಯನೊಂದಿಗೆ ನಿರ್ಜನ ಪ್ರದೇಶದಲ್ಲಿ ಇದ್ದ ಯುವತಿ ಮೇಲೆ 7 ಯುವಕರು ದೌರ್ಜನ್ಯವೆಸಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದಲ್ಲದೆ ದುರುಳರು ತಮ್ಮ ಮೊಬೈಲ್ ಫೋನ್ ಗಳಲ್ಲಿ ದೃಶ್ಯ ಚಿತ್ರೀಕರಿಸಿಕೊಂಡಿದ್ದಾರೆ. ಸೆಪ್ಟಂಬರ್ 21 ರಂದು ಬರೇಲಿಯ ಶೀಶ್ ಘರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಅಕ್ಟೋಬರ್ 7 ರಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕಾಣಿಸಿಕೊಂಡ ನಂತರ ಹುಡುಗಿಯ ಕುಟುಂಬದವರು 7 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354(ಲೈಂಗಿಕ ದೌರ್ಜನ್ಯ), 506(ಕ್ರಿಮಿನಲ್ ಬೆದರಿಕೆ), 342 ಹಾಗೂ 34ರ ಅಡಿ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವುಗಳ ಜೊತೆಗೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯ ಗೆಳೆಯನನ್ನು ಕೂಡ ಆರೋಪಿಯನ್ನಾಗಿ ಪರಿಗಣಿಸಿದ್ದಾರೆ.
ಘಟನೆಯ ಬಳಿಕ ಬಾಲಕಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಆಕೆಯ ಕುಟುಂಬದವರು ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಬಾಲಕಿ ಯಾರಿಗೂ ಕೃತ್ಯದ ಬಗ್ಗೆ ಹೇಳಿಕೊಂಡಿರಲಿಲ್ಲ. ಗೆಳೆಯನೊಂದಿಗೆ ಇದ್ದ ಬಾಲಕಿ ಥಳಿಸಿದ ಯುವಕರು ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಾಜ್ವಾನ್ ಸ್ಥಳೀಯ ಯುವಕರು ಕಿರುಕುಳ ನೀಡಿದ ಆರೋಪ ಮೇಲೆ ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.