ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೆಚ್ಚಾಗ್ತಿರುವ ಕೊರೊನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅಗತ್ಯವಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಕೋರ್ಟ್ ಸೂಚಿಸಿದೆ.
ರಾಜ್ಯದಲ್ಲಿ ಮೂರರಿಂದ ನಾಲ್ಕು ದಿನಗಳ ಕಾಲ ಕರ್ಫ್ಯೂ ಹಾಗೂ ವಾರಾಂತ್ಯದಲ್ಲಿ ಲಾಕ್ ಡೌನ್ ಜಾರಿಗೆ ತರುವ ಅಗತ್ಯವಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕೆಂದು ಕೋರ್ಟ್ ಸೂಚಿಸಿದೆ. ಗುಜರಾತ್ ನಲ್ಲಿ ಸೋಮವಾರ 3 ಸಾವಿರ ಪ್ರಕರಣ ದಾಖಲಾಗಿದೆ. ಈವರೆಗೆ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಲ್ಲಿ 899 ರೋಗಿಗಳು ದಾಖಲಾಗಿದ್ದಾರೆ. ಪ್ರತಿ ಗಂಟೆಗೆ 135 ಹೊಸ ಪ್ರಕರಣಗಳು ದಾಖಲಾಗ್ತಿವೆ. ಪ್ರಸ್ತುತ ರಾಜ್ಯದಲ್ಲಿ 16 ಸಾವಿರ 252 ಸಕ್ರಿಯ ಪ್ರಕರಣಗಳಿವೆ. 167 ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ.