alex Certify ರಾಜ್ಯಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ಮತ್ತೆ ಇಬ್ಬರು ಶಾಸಕರ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ಮತ್ತೆ ಇಬ್ಬರು ಶಾಸಕರ ರಾಜೀನಾಮೆ

ಅಹಮದಾಬಾದ್: ರಾಜ್ಯಸಭೆ ಚುನಾವಣೆ ನಡೆಯುವ ಮೊದಲೇ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಘಾತ ಉಂಟಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರಾದ ಜೀತು ಚೌಧರಿ ಮತ್ತು ಅಕ್ಷಯ್ ಪಟೇಲ್ ರಾಜೀನಾಮೆ ನೀಡಿದ್ದು ಇದರಿಂದ ಮಾರ್ಚ್ ನಂತರದಲ್ಲಿ ಇದುವರೆಗೆ 7 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಂತಾಗಿದೆ.

ಗುಜರಾತ್ ನಲ್ಲಿ ಜೂನ್ 19 ರಂದು 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿ ರಾಜ್ಯಸಭೆಗೆ ಆಯ್ಕೆಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಶಾಸಕರಿಂದ ಬಿಜೆಪಿ ರಾಜೀನಾಮೆ ಕೊಡಿಸಿದೆ ಎಂದು ಆರೋಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...