ಲಖ್ನೌ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಇದೀಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಲಾಗಿದೆ.
ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರನ್ನು ಮಾರ್ಗ ಮಧ್ಯೆಯೇ ತಡೆದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ರಾಹುಲ್ ಗಾಂಧಿ ಹಾಗೂ ಪೊಲೀಸರ ನಡುವೆ ಹೈ ಡ್ರಾಮವೇ ನಡೆದು ದೇಶಾದ್ಯಂತ ಸುದ್ದಿಯಾಗಿತ್ತು.
ಇದೀಗ ಉತ್ತರ ಪ್ರದೇಶ ಸರ್ಕಾರ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೇವಲ 5 ಜನರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅವಕಾಶ ನೀಡಿದೆ.