alex Certify ಹತ್ರಾಸ್ ಗೆ ತೆರಳಲು ರಾಹುಲ್ ಗೆ ಕೊನೆಗೂ ಅವಕಾಶ ಮಾಡಿಕೊಟ್ಟ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ರಾಸ್ ಗೆ ತೆರಳಲು ರಾಹುಲ್ ಗೆ ಕೊನೆಗೂ ಅವಕಾಶ ಮಾಡಿಕೊಟ್ಟ ಪೊಲೀಸರು

ಲಖ್ನೌ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಇದೀಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಲಾಗಿದೆ.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರನ್ನು ಮಾರ್ಗ ಮಧ್ಯೆಯೇ ತಡೆದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ರಾಹುಲ್ ಗಾಂಧಿ ಹಾಗೂ ಪೊಲೀಸರ ನಡುವೆ ಹೈ ಡ್ರಾಮವೇ ನಡೆದು ದೇಶಾದ್ಯಂತ ಸುದ್ದಿಯಾಗಿತ್ತು.

ಇದೀಗ ಉತ್ತರ ಪ್ರದೇಶ ಸರ್ಕಾರ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೇವಲ 5 ಜನರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅವಕಾಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...