ಹತ್ರಾಸ್ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ ವಿಸ್ತರಣೆ ಮಾಡಲಾಗಿದೆ.
ಉತ್ತರ ಪ್ರದೇಶ ಸರ್ಕಾರದಿಂದ ತನಿಖೆಗಾಗಿ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಸಮಯ ನಿಗದಿ ಮಾಡಲಾಗಿದೆ. ಈ ಮೊದಲು 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ಗಡುವು ನೀಡಲಾಗಿತ್ತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣದ ಎಸ್ಐಟಿ ತನಿಖೆಗೆ ವಹಿಸಿದ್ದಾರೆ.
ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ನಡೆಗೆ ಸ್ವಪಕ್ಷೀಯರಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಪ್ರಕರಣದಲ್ಲಿ ಪೊಲೀಸರ ನಡೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇನ್ನು ವಿಪಕ್ಷಗಳಿಂದಲೂ ತೀವ್ರ ಹೋರಾಟ ನಡೆಸಲಾಗಿದೆ.