ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಐವರನ್ನು ಅಮಾನತು ಮಾಡಿದೆ.
ಹತ್ರಾಸ್ ಎಸ್.ಪಿ. ವಿಕ್ರಾಂತ್ ವೀರ್, ಇನ್ಸ್ ಪೆಕ್ಟರ್ ದಿನೇಶ್ ವರ್ಮಾ, ಎಸ್ಐ ಜಗದೀಶ್ ಸಿಂಗ್, ಎಸ್ಒ ರಾಮ್ ಶಬ್ದ್, ಹೆಡ್ ಕಾನ್ಸ್ ಟೇಬಲ್ ಮಹೇಶ್ ಪಾಲ್ ಅವರನ್ನು ಎಸ್ಐಟಿ ಶಿಫಾರಸು ಮೇರೆಗೆ ಸಿಎಂ ಯೋಗಿ ಆದಿತ್ಯನಾಥ್ ಅಮಾನತುಗೊಳಿಸಿದ್ದಾರೆ.
ಯುವತಿ ಮೃತ ದೇಹವನ್ನು ಕುಟುಂಬದವರಿಗೆ ನೀಡದೇ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಅಲ್ಲದೇ ಯುವತಿ ಕುಟುಂಬದವರು ಮಾಧ್ಯಮ ಪ್ರತಿನಿಧಿಗಳ ಭೇಟಿಗೆ ಅವಕಾಶ ನೀಡದ ಪೊಲೀಸರ ನಡೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದೆ.