![Hathras incident: They're not letting us meet media, claims family member | Business Standard News](https://bsmedia.business-standard.com/_media/bs/img/article/2020-10/01/full/1601552121-4028.jpg)
ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.
ನಮ್ಮನ್ನು ಮನೆಯಿಂದ ಹೊರಗೆ ಬಿಡುತ್ತಿಲ್ಲ ಎಂದು ಪೊಲೀಸರ ವಿರುದ್ಧ ಯುವತಿ ಕುಟುಂಬದವರು ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಹತ್ತಿರ ಮಾತನಾಡಲು ಬಿಡುತ್ತಿಲ್ಲ. ಇಡೀ ಗ್ರಾಮವನ್ನು ಸ್ಥಳೀಯ ಪೊಲೀಸರು ಸುತ್ತುವರೆದಿದ್ದು ಮಾಧ್ಯಮ ಪ್ರತಿನಿಧಿಗಳಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಲಾಗುತ್ತಿದೆ ಎಂದು ದೂರಿದ್ದಾರೆ.
ಯುವತಿ ಮೃತಪಟ್ಟ ಸಂದರ್ಭದಲ್ಲಿ ಕುಟುಂಬದರನ್ನು ದೂರವಿಟ್ಟು ಅಂತ್ಯ ಸಂಸ್ಕಾರ ಮಾಡಿದ್ದ ಪೊಲೀಸರ ನಡೆಗೆ ದೇಶಾದ್ಯಂತ ತೀವ್ರ ಆಕ್ರೊಶ ವ್ಯಕ್ತವಾಗಿದೆ. ಹೀಗಿರುವಾಗಲೇ ಕುಟುಂಬದವರು ಮನೆಯಿಂದ ಹೊರಗೆ ಬರದಂತೆ ಪೊಲೀಸರು ತಡೆದಿದ್ದಾರೆ ಎಂದು ದೂರಲಾಗಿದೆ.