ನವದೆಹಲಿ: ಆರೋಗ್ಯ ಕಾರ್ಡ್ ಗಾಗಿ ಖಾಸಗಿ ಮಾಹಿತಿ ಪಡೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಯಡಿಯಲ್ಲಿ ದೇಶದ ನಾಗರಿಕರಿಗೆ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದ ಸಿಬ್ಬಂದಿ ಪ್ರತಿ ನಾಗರಿಕರಿಂದ ಅವರ ಖಾಸಗಿ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂಬ ಕುರಿತಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.
ಸರ್ಕಾರದ ಆರೋಗ್ಯ ಡೇಟಾ ನಿಯಮಗಳನ್ನು ಪರಿಶೀಲಿಸಲು ಕೇವಲ ಒಂದು ವಾರದಷ್ಟು ಸಮಯವಿರುತ್ತದೆ. ನಾಗರಿಕರ ಖಾಸಗಿ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಜನರ ಆರ್ಥಿಕ ಪರಿಸ್ಥಿತಿ, ವಂಶವಾಹಿ ಮಾಹಿತಿಗಳು, ಲೈಂಗಿಕಜೀವನ, ಜಾತಿ, ಧರ್ಮ ಹಾಗೂ ರಾಜಕೀಯ ನಂಬಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಆರೋಗ್ಯ ಕಾರ್ಡ್ ಗಾಗಿ ಖಾಸಗಿ ಮಾಹಿತಿಯನ್ನು ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.