alex Certify ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ಪ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು.

ಆಸ್ಪತ್ರೆಗೆ ಅಡ್ಮಿಟ್ ಆದ ವ್ಯಕ್ತಿ ಹಿಂದೆ ಎಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರಿಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ನೀಡಿದ ಸಂದರ್ಭದಲ್ಲಿ ಅವರ ಆರೋಗ್ಯ ಪರಿಸ್ಥಿತಿ ಹೇಗಿತ್ತು ಎಂಬುದೆಲ್ಲವನ್ನು ಒಂದು ಬೆರಳ ತುದಿಯಲ್ಲಿ ಪಡೆದುಕೊಳ್ಳಬಹುದಾಗಿದೆ.

ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತಿಸಿದ್ದು, ಕ್ಯಾಬಿನೆಟ್ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದ್ದು ಸ್ವಾತಂತ್ರ್ಯದಿನದ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜನ ಸ್ವಂತ ಇಚ್ಛೆಯಿಂದ ಕಾರ್ಡ್ ಪಡೆದುಕೊಳ್ಳಬಹುದು. ಹೆಲ್ತ್ ಗುರುತಿನ ಚೀಟಿಯಲ್ಲಿ ವ್ಯಕ್ತಿಯ ಆರೋಗ್ಯ ಮಾಹಿತಿ, ವೈದ್ಯಕೀಯ ಚಿಕಿತ್ಸೆ, ಸೌಲಭ್ಯ ಮೊದಲಾದವುಗಳು ಇರಲಿವೆ. ನಂತರ ಇ -ಫಾರ್ಮಸಿ ಮತ್ತು ಟೆಲಿಮೆಡಿಸಿನ್ ಸೇವೆಗಳನ್ನು ನೀಡಲಾಗುವುದು. ಯಾವುದೇ ವ್ಯಕ್ತಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಹೋದಲ್ಲಿ ಆ ವ್ಯಕ್ತಿಯ ವಿವರಗಳು ಕೂಡಲೇ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು. ಯೋಜನೆಗಾಗಿ 470 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...