ಕೊರೊನಾ ಲಸಿಕೆ ಬಗ್ಗೆ ಭಾರತದಲ್ಲಿ ತಯಾರಿ ಜೋರಾಗಿ ನಡೆದಿದೆ. ಕೊರೊನಾ ಲಸಿಕೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ಇಂದು ಲಸಿಕೆ ಡ್ರೈ ರನ್ ನಡೆಯುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಹತ್ವದ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಅವರು ಹೇಳಿದ್ದಾರೆ.
3 ಕೋಟಿ ಉಚಿತ ಲಸಿಕೆಯಲ್ಲಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 2 ಕೋಟಿ ಫ್ರಂಟ್ಲೈನ್ ವರ್ಕರ್ಸ್ ಗೆ ನೀಡಲಾಗುವುದು ಎಂದವರು ಹೇಳಿದ್ದಾರೆ. ಆದ್ಯತೆ ಮೇರೆಗೆ 27 ಕೋಟಿ ಜನರಿಗೆ ಜುಲೈ ವೇಳೆಗೆ ಲಸಿಕೆ ನೀಡಲಾಗುವುದು ಎಂದಿದ್ದಾರೆ. ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೆಹಲಿ ಮಾತ್ರವಲ್ಲ ದೇಶದ ಎಲ್ಲ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ಸಿಗಲಿದೆ ಎಂದಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 116 ಜಿಲ್ಲೆಗಳ 259 ಸ್ಥಳಗಳಲ್ಲಿ ಕೊರೊನಾ ಲಸಿಕೆ ಡ್ರೈರನ್ ಮಾಡ್ತಿದೆ.ಲಸಿಕೆ ಬಗ್ಗೆ ವದಂತಿಗಳು ಹರಡುತ್ತಿವೆ. ಅದಕ್ಕೆ ಕಿವಿಗೊಡಬೇಡಿ ಎಂದು ಸಚಿವರು ಇದೇ ವೇಳೆ ಹೇಳಿದ್ದಾರೆ.