
ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಹೈದರಾಬಾದ್ ನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೈದರಬಾದ್ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಭಾರೀ ಮಳೆಯ ಕಾರಣ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ. ಅಲ್ಲದೆ, ತಗ್ಗು ಪ್ರದೇಶದ ಜನರ ಸ್ಥಳಾಂತರಕ್ಕೆ ಸೂಚಿಸಲಾಗಿದೆ.