ತಮಿಳುನಾಡಿನ ಚೆನ್ನೈನಲ್ಲಿ ವರುಣನ ಆರ್ಭಟ ಮಿತಿಮೀರಿದೆ. ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಈಶಾನ್ಯ ಮಾನ್ಸೂನ್ ಪ್ರಾರಂಭವಾಗಿರೋದ್ರಿಂದ ಈ ರೀತಿ ಮಳೆಯಾಗ್ತಿದೆ ಅಂತಾ ಹವಾಮಾನ ಇಲಾಖೆ ಮಾಹಿತಿ ನೀಡಿದೆ .
ಕಳೆದ ವಾರ ಕೂಡ ಚೆನ್ನೈನಲ್ಲಿ ಭಾರೀ ಮಳೆ ಸಂಭವಿಸಿತ್ತು. ಇದರಿಂದಾಗಿ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಮಳೆಯಾಗ್ತಿದೆ ಮೆಟ್ರೊಲಾಜಿಕಲ್ ಅಧಿಕಾರಿ ಮಾಹಿತಿ ನೀಡಿದ್ದಾರೆ.