alex Certify ಧೋನಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಆರೋಪಿ ರಾಂಚಿಗೆ ಶಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧೋನಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಆರೋಪಿ ರಾಂಚಿಗೆ ಶಿಫ್ಟ್

ಚೆನ್ನೈ ಸೂಪರ್​ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್​ ಧೋನಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಬಂಧಿತ ಆರೋಪಿಯನ್ನ ರಾಂಚಿಗೆ ಕರೆದೊಯ್ಯಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ತಂಡ ಸೋತ ಬಳಿಕ ಆಕ್ರೋಶಗೊಂಡಿದ್ದ 16 ವರ್ಷದ ಅಪ್ರಾಪ್ತ ಸೋಶಿಯಲ್​ ಮೀಡಿಯಾದಲ್ಲಿ 5 ವರ್ಷದ ಝೀವಾ ಧೋನಿಗೆ ಅತ್ಯಾಚಾರದ ಬೆದರಿಕೆಯೊಡ್ಡಿದ್ದ.

ಧೋನಿ ಪತ್ನಿ ಸಾಕ್ಷಿ ಸಿಂಗ್​ ಇನ್ಸ್ಟಾಗ್ರಾಂ ಅಕೌಂಟ್​ನಲ್ಲಿ ಈ ರೀತಿ ಬೆದರಿಕೆಯೊಡ್ಡಿದ್ದ ಅಪ್ರಾಪ್ತನನ್ನ ಗುಜರಾತ್​ ಪೊಲೀಸರು ಬಂಧಿಸಿದ್ದರು. ಸದಾರ್​ ಆಸ್ಪತ್ರೆಯಲ್ಲಿ ಅಪ್ರಾಪ್ತ ಆರೋಪಿಗೆ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಆತನನ್ನ ರಾಂಚಿಗೆ ಕರೆದೊಯ್ಯಲಾಗಿದೆ. ಈ ತನಿಖೆಯ ಮುಂದಿನ ಜವಾಬ್ದಾರಿಯನ್ನ ಸ್ಥಳೀಯ ಠಾಣೆ ಪೊಲೀಸರು ನಡೆಸಲಿದ್ದಾರೆ ಎನ್ನಲಾಗಿದೆ.

ತನಿಖೆಯ ವೇಳೆಯಲ್ಲಿ ಅಪ್ರಾಪ್ತ ಆರೋಪಿಯನ್ನ ಮಕ್ಕಳ ಪುರ್ನವಸತಿ ಕೇಂದ್ರದಲ್ಲಿ ಇಡಲಿದ್ದೇವೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ,

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...