ರಾಜ್ಯದಲ್ಲಿ ಕೊರೋನಾ ಸಂಕಷ್ಟದಿಂದಾಗಿ ಆದಾಯಕ್ಕೆ ಭಾರಿ ಹಿನ್ನಡೆಯಾಗಿದೆ. ಇದೇ ವೇಳೆ ಭಾರಿ ಮಳೆ ಮತ್ತು ನೆರೆಹಾವಳಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮತ್ತೊಮ್ಮೆ ತೀವ್ರ ಸಂಕಷ್ಟ ಎದುರಾಗಿದೆ.
ಕಳೆದ ವರ್ಷ ಅರ್ಧ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ತತ್ತರಿಸಿ ಹೋಗಿದ್ದರು. ಈ ವರ್ಷವೂ ಅಂತಹುದೇ ಪರಿಸ್ಥಿತಿ ಎದುರಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಅಗತ್ಯವಾದ ನೆರವು ನೀಡುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ.
ಭೀಕರ ಬರ ಮತ್ತು ನೆರೆ ಹಾವಳಿ, ಕೊರೋನಾ ಸಂಕಷ್ಟದಿಂದ ರಾಜ್ಯ ತತ್ತರಿಸಿರುವ ಹೊತ್ತಲ್ಲಿ ಕೇಂದ್ರ ಸರ್ಕಾರ ನೆರವು ನೀಡಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಆಡಳಿತವಿದ್ದರೂ ನೆರವು ನೀಡುವಂತೆ ಧೈರ್ಯವಾಗಿ ಕೇಳುತ್ತಿಲ್ಲ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು ರಾಜ್ಯ ಸರ್ಕಾರ ನೆರವು ಕೇಳಲು ಧೈರ್ಯ ಪ್ರದರ್ಶಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ಇನ್ನು ಪ್ರವಾಹ ಪರಿಸ್ಥಿತಿ ವೇಳೆಯಲ್ಲಿ ಅಗತ್ಯವಾದ ನೆರವು ನೀಡುತ್ತಿಲ್ಲ. ಮೊದಲೇ ಕೊರೋನಾ ಮತ್ತು ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರದ ಸಂಕಷ್ಟದಲ್ಲಿದ್ದು ನೆರವು ನೀಡುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.
ತಮ್ಮ ಸ್ಥಾನ ಮಾನ ಉಳಿಸಿಕೊಳ್ಳಲು ದೆಹಲಿ ಪರೇಡ್ ನಡೆಸುವ ಬಿಜೆಪಿ ನಾಯಕರು ರಾಜ್ಯದ ಹಕ್ಕು ಕೇಳಲು ಪ್ರಯತ್ನಿಸುತ್ತಿಲ್ಲ. ಜಿಎಸ್ಟಿ ಪರಿಹಾರದ ಎರಡನೇ ಕಂತನ್ನು ರಾಜ್ಯಕ್ಕೆ ನೀಡಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಹೇಳಿದೆ. 15 ನೇ ಹಣಕಾಸು ಆಯೋಗದ ರಾಜ್ಯದ ತೆರಿಗೆಯ ಪಾಲಿನಲ್ಲಿ 9000 ಕೋಟಿ ರೂಪಾಯಿ ಖೋತಾ ಮಾಡಿದೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಇನ್ನು ರಾಜ್ಯಕ್ಕೆ ಅಗತ್ಯವಾದ ನೆರವನ್ನು ಪಡೆಯುವಲ್ಲಿ ರಾಜ್ಯದ ಸಂಸದರು, ಕೇಂದ್ರ ಸಚಿವರು ವಿಫಲರಾಗಿದ್ದಾರೆ. ಎನ್ನುವ ದೂರು ಕೇಳಿ ಬಂದಿದೆ. ಪಿಎಂ ಕೇರ್ಸ್ ನಿಧಿಗೆ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದರೂ ರಾಜ್ಯಕ್ಕೆ ಬಿಡಿಗಾಸು ನೀಡಿಲ್ಲ ಎಂದು ದೂರಲಾಗಿದೆ.
ನಾಳೆ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ರಾಜ್ಯಕ್ಕೆ ನೆರವು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ರಾಜ್ಯದ ವಿಚಾರದಲ್ಲಿ ಯಾವಾಗಲೂ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಸ್ಪಂದಿಸುವ ಸಾಧ್ಯತೆ ಇಲ್ಲವೆನ್ನಲಾಗಿದೆ.