ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿದಿಂದ ಗುಣಮುಖರಾಗಿದ್ದ ಅಮಿತ್ ಶಾ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇದೀಗ ತಡ ರಾತ್ರಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾ ಅವರಿಗೆ ಆಗಸ್ಟ್ 2ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಈ ಬಗ್ಗೆ ಸ್ವತ: ಅಮಿತ್ ಶಾ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ಶಾ ಅವರಿಗೆ ಆ.14ರಂದು ಕೊರೊನಾ ನೆಗೆಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಹೋಂ ಐಸೋಲೇಷನ್ ನಲ್ಲಿದರು.