alex Certify ಪ್ರೇಮಿಗಳು ಸಲ್ಲಾಪದಲ್ಲಿದ್ದಾಗಲೇ ನಡೆದಿದೆ ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳು ಸಲ್ಲಾಪದಲ್ಲಿದ್ದಾಗಲೇ ನಡೆದಿದೆ ನಡೆಯಬಾರದ ಘಟನೆ

ಲಖ್ನೋ: ಪ್ರೇಮಿಗಳು ಜೊತೆಯಾಗಿದ್ದಾಗಲೇ ಕುಟುಂಬದವರಿಗೆ ಸಿಕ್ಕಿಬಿದ್ದಿದ್ದು ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.

ಉತ್ತರಪ್ರದೇಶದ ಬಾಂಡಾ ಜಿಲ್ಲೆಯ ಮಾತೌಂಡ್ ಪ್ರದೇಶದ ಕಾರ್ಚಾ ಹಳ್ಳಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರಿಯಾಂಕಾ ಮತ್ತು ಭೋಲಾ ಮೃತಪಟ್ಟ ಪ್ರೇಮಿಗಳು ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ವೇಳೆಯಲ್ಲಿ ಪ್ರಿಯಾಂಕಾ ಮತ್ತು ಭೋಲಾ ಜೊತೆಗೆ ಇರುವುದನ್ನು ಗಮನಿಸಿದ ಕುಟುಂಬದವರು ಆಕ್ರೋಶಗೊಂಡಿದ್ದು ಗುಡಿಸಲಿಗೆ ಬೀಗ ಹಾಕಿ ಬೆಂಕಿ ಹಚ್ಚಿದ್ದಾರೆ. ಇಬ್ಬರು ಬೆಂಕಿ ತಗಲಿ ಕಿರುಚಾಡಿದ್ದನ್ನು ಗಮನಿಸಿದ ಸ್ಥಳೀಯರು ರಕ್ಷಣೆಗೆ ಧಾವಿಸಿ ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಟುಂಬದ ಒಂಬತ್ತು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಮಹೇಂದ್ರ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...