alex Certify ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಗಂಡನ ಕಾಮದಾಹಕ್ಕೆ ರೋಸಿಹೋದ ಪತ್ನಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಗಂಡನ ಕಾಮದಾಹಕ್ಕೆ ರೋಸಿಹೋದ ಪತ್ನಿಯಿಂದ ಘೋರ ಕೃತ್ಯ

ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾಳೆ.

ಮಧುರೈ ಜಿಲ್ಲೆ ತಿರುಮಂಗಲಂನ 34 ವರ್ಷದ ಸುಧೀರ್ ಮೃತಪಟ್ಟ ವ್ಯಕ್ತಿ. 8 ವರ್ಷಗಳ ಹಿಂದೆ ಶಾಲಾ ಶಿಕ್ಷಕಿ ಅರುಳ್ ಸೆಲ್ವಿಯನ್ನು ಮದುವೆಯಾಗಿದ್ದು ದಂಪತಿಗೆ ಒಬ್ಬಳು ಮಗಳಿದ್ದಾಳೆ. ತೀವ್ರ ಅಸ್ವಸ್ಥನಾಗಿದ್ದ ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಪತ್ನಿ ಹಾಸಿಗೆಯಿಂದ ಪ್ರಜ್ಞೆತಪ್ಪಿ ಬಿದ್ದಿರುವುದಾಗಿ ವೈದ್ಯರಿಗೆ ತಿಳಿಸಿದ್ದಾಳೆ. ಆದರೆ ಅದಾಗಲೇ ಸುಧೀರ್ ಮೃತಪಟ್ಟಿರುವುದಾಗಿ ಪರೀಕ್ಷೆ ನಡೆಸಿದ ವೈದ್ಯರು ಹೇಳಿದ್ದಾರೆ. ಆತನ ಖಾಸಗಿ ಅಂಗಗಳಿಗೆ ಗಾಯವಾಗಿರುವುದನ್ನು ಗಮನಿಸಿದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಅರುಳ್ ಸೆಲ್ವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಮದ್ಯವ್ಯಸನಿಯಾಗಿದ್ದ ಸುಧೀರ್ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಮಾಡುತ್ತಿದ್ದ. ಯಾವಾಗಲೂ ಲೈಂಗಿಕ ಕ್ರಿಯೆಗೆ ಪೀಡಿಸುತ್ತಿದ್ದ. ಅಸಭ್ಯವಾಗಿ ವರ್ತಿಸುತ್ತಿದ್ದ. ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ನಿರಾಕರಿಸಿದಾಗ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಗಂಡನ ಕಾಮದಾಹದಿಂದ ರೋಸಿಹೋದ ಪತ್ನಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದು, ಇಬ್ಬರು ಗೆಳತಿಯರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿ ಖಾಸಗಿ ಭಾಗಗಳ ಕಚ್ಚಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸುಧೀರ್ ಪತ್ನಿ ಹಾಗೂ ಮತ್ತಿಬ್ಬರನ್ನು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...