ಕೊರೊನಾ ಲಸಿಕೆ ಪಡೆಯಲು ಬಯಸುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ತಮ್ಮ ಅನಾರೋಗ್ಯವನ್ನ ತೋರಿಸುವ ದೃಢೀಕರಣಗೊಂಡ ವೈದ್ಯಕೀಯ ಪ್ರಮಾಣಪತ್ರ ಹೊಂದುವುದು ಅನಿವಾರ್ಯವಾಗಿರಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ .
ಇನ್ನು ಈ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಎರಡನೇ ಹಂತದ ಕೊರೊನಾ ವ್ಯಾಕ್ಸಿನೇಷನ್ ಡ್ರೈವ್ ಕಾರ್ಯಕ್ರಮ ಮಾರ್ಚ್ 1ರಿಂದ ಆರಂಭವಾಗಲಿದೆ. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೂ ಆದ್ಯತೆ ನೀಡಲಾಗಿದೆ. ಈ ಹಂತದಲ್ಲಿ 27 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಇದರಲ್ಲಿ 60 ವರ್ಷ ಮೇಲ್ಪಟ್ಟ 10 ಕೋಟಿ ಮಂದಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ರು.
ಹೃದಯ ಸಂಬಂಧಿ ಕಾಯಿಲೆ, ಮೂತ್ರಪಿಂಡ, ಯಕೃತ್ತಿನ ದೀರ್ಘ ಕಾಲದ ಕಾಯಿಲೆ, ಮಧುಮೇಹ, ಕ್ಯಾನ್ಸರ್, ಅಸ್ತಮಾ, ಸ್ಥೂಲಕಾಯ ಸೇರಿದಂತೆ ವಿವಿಧ ಸಮಸ್ಯೆ ಉಳ್ಳವರು ತಮ್ಮ ವೈದ್ಯಕೀಯ ಸ್ಥಿತಿಯನ್ನ ದೃಢೀಕರಿಸುವ ವೈದ್ಯಕೀಯ ಪ್ರಮಾಣ ಪತ್ರವನ್ನ ಹೊಂದಿರಬೇಕಾದ ಅನಿವಾರ್ಯತೆ ಇದೆ .