alex Certify ರಾಮ್ ಗೋಪಾಲ್ ವರ್ಮಾ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿದ ಅತ್ಯಾಚಾರ ಸಂತ್ರಸ್ತೆ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮ್ ಗೋಪಾಲ್ ವರ್ಮಾ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿದ ಅತ್ಯಾಚಾರ ಸಂತ್ರಸ್ತೆ ಕುಟುಂಬ

ರಾಮ್ ಗೋಪಾಲ್ ವರ್ಮಾ ಅವರು ನಿರ್ಮಿಸುತ್ತಿರುವ ಚಲನಚಿತ್ರದ ಬಿಡುಗಡೆಗೆ ಅವಕಾಶ ಕೊಡಬಾರದೆಂದು ಹೈದರಾಬಾದ್‌‌ನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಕುಟುಂಬದವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

2019ರಲ್ಲಿ ಅತ್ಯಾಚಾರಕ್ಕೊಳಗಾದ ಪಶುವೈದ್ಯೆಯ ತಂದೆ ತೆಲಂಗಾಣ ನ್ಯಾಯಾಲಯದ ಕದ ತಟ್ಟಿದ್ದು, ಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡದಂತೆ‌ ಕೋರಿದ್ದಾರೆ. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ವಿಲೇವಾರಿ ಮಾಡಿದೆ. ಚಿತ್ರ ನಿರ್ಮಾಪಕ ವರ್ಮ ಅವರು ಈ ರೀತಿಯ ಕೋರಿಕೆ ಪ್ರಿಮೆಚೂರ್ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಾಲ್ವರು ಲಾರಿ ಚಾಲಕರು ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಈ ಘಟನೆ ಬಳಿಕ ಅತ್ಯಾಚಾರ ಮತ್ತು ಹತ್ಯೆ ಕುರಿತು ಚಲನಚಿತ್ರ ಮಾಡುವ ನಿರ್ಧಾರವನ್ನು ವರ್ಮ ಪ್ರಕಟಿಸಿದ್ದರು.

2019ರ ನವೆಂಬರ್ನಲ್ಲಿ ಹೈದರಾಬಾದ್‌ನ ಶಡ್ನಗರ್‌‌ನಲ್ಲಿ ಪಶು ವೈದ್ಯೆಯ ಶವ ಪತ್ತೆಯಾಗಿತ್ತು. ನಂತರ ಪೊಲೀಸರು ಎನ್ ಕೌಂಟರ್‌ನಲ್ಲಿ ಆರೋಪಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಚಿತ್ರ ನಿರ್ಮಾಪಕರು ಸೆನ್ಸಾರ್ ಬೋರ್ಡ್ ಮುಂದೆ ಹೋಗುವ ಮೊದಲು ನ್ಯಾಯಾಲಯವು ಈ ಹಂತದಲ್ಲಿ ಯಾವುದೇ ನಿರ್ದೇಶನ ಕೊಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಸಹ ದಾವೆ ಹೂಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ದಿಶಾ ಎನ್ಕೌಂಟರ್ ಚಿತ್ರದ ಟ್ರೈಲರ್ ಅನ್ನು ವರ್ಮ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಟ್ರೈಲರ್ ಎರಡು ವಾರಗಳ ಹಿಂದೆ ಬಿಡುಗಡೆಯಾಗಿದ್ದು, 2.9 ಮಿಲಿಯನ್ ವೀಕ್ಷಣೆ ಪಡೆದಿದೆ.

ಪ್ರೋಮೊ ಪ್ರಕಾರ ನವೆಂಬರ್ 26ರಂದು ಚಿತ್ರ ಬಿಡುಗಡೆಯಾಗಲಿದೆ. ತಮ್ಮ ಅನುಮತಿ ಪಡೆಯದೆ ರಾಮ್ ಗೋಪಾಲ್ ವರ್ಮಾ ಚಿತ್ರ ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎಂಬುದು ಪೋಷಕರ ವಾದವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...