ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದೆ. ದೆಹಲಿಯ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಕೊರತೆಯಿಂದ 20 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಆಕ್ಸಿಜನ್ ಕೊರತೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳು ದೆಹಲಿ ಹೈಕೋರ್ಟ್ ಮೆಟ್ಟಿಲೇರಿವೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಯಾರಾದರೂ ಅಡ್ಡಿ ಮಾಡಿದರೆ ಅಂತವರನ್ನು ನೇಣಿಗೇರಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.
ಆಕ್ಸಿಜನ್ ಪೂರೈಕೆಗೆ ಅಡ್ದಿಯಾಗಿದೆ. ನಿನ್ನೆ 297 ಮೆಟ್ರಿಕ್ ಟನ್ ನಷ್ಟು ಮಾತ್ರ ಆಕ್ಸಿಜನ್ ಪೂರೈಕೆಯಾಗಿದೆ. ದೆಹಲಿ ಆಸ್ಪತ್ರೆಗಳಿಗೆ 480 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಪೂರೈಕೆ ಆಗದಿದ್ದರೆ ಇಡೀ ವೈದ್ಯಕೀಯ ವ್ಯವಸ್ಥೆಯೇ ಕುಸಿಯಲಿದೆ ಎಂದು ದೆಹಲಿ ಸರ್ಕಾರ ಕೂಡ ಹೈಕೋರ್ಟ್ ಗೆ ತಿಳಿಸಿತ್ತು.
ಈ ಹಿನ್ನೆಲೆಯಲ್ಲಿ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗುತ್ತಿರುವವರು ಯಾರು ಎಂದು ಮಾಹಿತಿ ನೀಡಿ ಅಂತವರನ್ನು ಗಲ್ಲಿಗೇರಿಸುತ್ತೇವೆ ಎಂದು ತಿಳಿಸಿದೆ.